HomeKarnatakaBIG NEWS: ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ; ಬಜೆಟ್ ಬಗ್ಗೆ ಕೇಂದ್ರ ಸಚಿವ...

BIG NEWS: ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ; ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಕ್ಕಿಂತ ಬಿಜೆಪಿಗೆ ಬೈದಿದ್ದೇ ಹೆಚ್ಚು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಬಿಜೆಪಿ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೆ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಿ ದರ ಏರಿಕೆ ಮಾಡಿದ್ದಾರೆ. ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ. ಎನ್ ಇ ಪಿ ಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು. ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular