
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಲೈನ್ ನಿರ್ಣಯ ಪಾಸ್ ಮಾಡಿದ್ದೆವು. ರಾಹುಲ್ ಗಾಂಧಿಯವರು ಕರೆ ಮಾಡಿ ಮಾತನಾಡಿದ್ದರು. ಎಲ್ಲರೂ ಜೊತೆಯಾಗಿ ಹೋಗಬೇಕು ಅಂತಾ ಹೇಳಿದ್ದರು. ಹೈಕಮಾಂಡ್ ಸೂತ್ರವನ್ನು ನಾವೆಲ್ಲಾ ಒಪ್ಪಿಕೊಂಡಿದ್ದೇವೆ ಎಂದು ಹೇಳಿದರು.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುತ್ತೇವೆ. ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ನಾಳೆ ಮತ್ತೆ ವಾಪಸ್ ದೆಹಲಿಗೆ ಬರುತ್ತೇವೆ ಎಂದು ಹೇಳಿದರು.

