BIG NEWS: ಎಸ್.‌ಎಸ್.‌ಎಲ್‌.ಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳು, ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದೀಗ 10ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಜಯಂತ್ ರಜತಾದ್ರಯ್ಯ ಮೃತ ವಿದ್ಯಾರ್ಥಿ. ಜಯಂತ್ ಶಾಲೆಗೆ ಹೋಗಲು ರೆಡಿಯಾಗುತ್ತಿದ್ದಾಗ ತೀವ್ರ ಎದೆನೋವಿನಿಂದ ಬಳಲಿದ್ದಾನೆ. ತಕ್ಷಣ ಆತನನ್ನು ಕುಟುಂಬದವರು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು.

ಆದರೆ ವಿದ್ಯಾರ್ಥಿ ಜಯಂತ್ ಅಷ್ಟರಲ್ಲಾಗಲೇ ಹೃದಯಾಘಾತಕ್ಕೆ ಒಳಗಾಗಿ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read