BIG NEWS: ಏಕಾಏಕಿ ಕುಸಿದುಬಿದ್ದ ಸೇತುವೆ; ಅವಶೇಷಗಳಡಿ ಸಿಲುಕಿಕೊಂಡ ಕಾರು

ರಾಮನಗರ; ರಾಮನಗರದಲ್ಲಿ ಮತ್ತೊಂದು ಸೇತುವೆ ಕುಸಿದುಬಿದ್ದಿದೆ. ಸೇತುವೆ ಮೇಲೆ ಕಾರು ಚಲಿಸುತ್ತಿದ್ದಾಗಲೇ ಈ ಅವಘಡ ಸಂಭವಿಸಿದ್ದು, ಕಾರು ಸೇತುವೆಯಲ್ಲಿ ಸಿಲುಕಿಕೊಂಡಿದೆ.

ರಾಮನಗರದ ಹರಿಸಂದ್ರಗ್ರಾಮದಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಮೂಲದ ಕಾರು ಇದಾಗಿದ್ದು, ಹೊಸ ವರ್ಷದ ಸಂಭ್ರಮಾಚರಣೆಗೆ ತೆರಳುತ್ತಿದ್ದರು. ಈ ವೇಳೆ ಸೇತುವೆ ಮೇಲೆ ಕಾರು ತೆರಳುತ್ತಿದ್ದಾಗಲೇ ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read