ಬೆಂಗಳೂರು : ಏ.14 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಅಂಬೇಡ್ಕರ್ ಜಯಂತಿ’ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ| ಬಿ. ಆರ್. ಅಂಬೇಡ್ಕರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.
ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ໖: 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ| ಬಿ. ಆರ್. ಅಂಬೇಡ್ಕರ್ರವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಕರು (ಅಭಿವೃದ್ಧಿ)ರವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ಈ ಮೂಲಕ ತಿಳಿಸಿದೆ.

