ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 6000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಂದೇ ದಿನಲ್ಲಿ 6,155 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಈವರೆಗೆ 5,30,954 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 31,194 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,89,111 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 01,963 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,22,663 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,09,378 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
Covid-19 | India records 6,155 new cases in 24 hours; Active case tally stands at 31,194
Daily positivity rate 5.63%
(Representative Image) pic.twitter.com/wAeSPRFdE1
— ANI (@ANI) April 8, 2023