HomeIndiaBIG NEWS: ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 3000ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 3,016 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,862 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 13,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,66,925 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 15,784 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,92,481 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,10,522 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular