BIG NEWS: ಒಂದೇ ವಿಮಾನದಲ್ಲಿ ನಿಯೋಜಿತ ಸಿಎಂ – ಡಿಸಿಎಂ ದೆಹಲಿ ಪ್ರಯಾಣ…!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆಗಳು ನಡೆದಿವೆ.

ಇದರ ಮಧ್ಯೆ ಇದಕ್ಕೂ ಪೂರ್ವಭಾವಿಯಾಗಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ನವದೆಹಲಿಗೆ ಒಂದೇ ವಿಮಾನದಲ್ಲಿ ತೆರಳುತ್ತಿದ್ದು, ಇದಕ್ಕಾಗಿ ವಿಶೇಷ ವಿಮಾನ ಈಗಾಗಲೇ ಸಿದ್ಧವಾಗಿ ನಿಂತಿದೆ.

ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ನಾಳಿನ ಪ್ರಮಾಣವಚನ ಕಾರ್ಯಕ್ರಮಕ್ಕೆ ಪಕ್ಷದ ನಾಯಕರನ್ನು ಸ್ವಾಗತಿಸುವುದರ ಜೊತೆಗೆ ನೂತನ ಸಂಪುಟದಲ್ಲಿ ಯಾರ್ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read