BIG NEWS: ಒಬ್ಬೊಬ್ಬರಾಗಿ ಬಿಜೆಪಿ ತೊರೆಯುತ್ತಿರುವ ಲಿಂಗಾಯತ ನಾಯಕರು; ಡ್ಯಾಮೇಜ್ ಕಂಟ್ರೋಲ್ ಗಾಗಿ BSY ನಿವಾಸದಲ್ಲಿಂದು ಮಹತ್ವದ ಸಭೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಮಧ್ಯೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಜಗದೀಶ್ ಶೆಟ್ಟರ್, ಬಿಜೆಪಿಯ ಕೆಲವರಿಂದ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ಈ ಆರೋಪ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಪ್ರಭಾಕರ್ ಕೋರೆ ಅವರಂತಹ ಹಿರಿಯ ನಾಯಕರು, ಪ್ರಭಾವಿ ಲಿಂಗಾಯತ ಸಮುದಾಯವನ್ನು ಯಾವುದೇ ರಾಜಕೀಯ ಪಕ್ಷಗಳು ಕಡೆಗಣಿಸಬಾರದು ಎಂದಿದ್ದರು. ಈ ನಡುವೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಮತ್ತೊಬ್ಬ ಲಿಂಗಾಯಿತ ನಾಯಕ ಆಯನೂರು ಮಂಜುನಾಥ್ ಇಂದು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೊತೆಗೆ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದಾರೆ.

ಈ ಎಲ್ಲ ವಿದ್ಯಮಾನಗಳು ಬಿಜೆಪಿ ಹಿರಿಯ ನಾಯಕರನ್ನು ಕಂಗೆಡಿಸಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಲಿಂಗಾಯತ ಸಮುದಾಯ ಈ ಮೊದಲಿನಿಂದಲೂ ಬಿಜೆಪಿ ಜೊತೆಗೆ ನಿಂತಿದ್ದು, ಇದು ಚದುರಿ ಹೋಗದಂತೆ ನೋಡಿಕೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ಬಿಜೆಪಿ ಲಿಂಗಾಯತ ನಾಯಕರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read