BIG NEWS: ಒಬ್ಬ ಅನುಭವಿ ರಾಜಕಾರಣಿ ಬಾಯಲ್ಲಿ ಇಂತಾ ಮಾತು……; ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದ ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಮುಸ್ಲಿಂ ಮುಖ್ಯಮಮಂತ್ರಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಮುಖ್ಯಮಂತ್ರಿ ಹುದ್ದೆ ಜಾತಿಗೆ ಸೀಮಿತ ಮಾಡಬೇಡಿ ಎಂದು ಹೇಳಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಹುದ್ದೆ ಜಾತಿಗೆ ಸೀಮಿತ ಮಾಡಬೇಡಿ. ನಾಡಿನ ಹಿತದೃಷ್ಟಿ ಇಟ್ಟುಕೊಂಡು ಮುಖ್ಯಮಂತ್ರಿಯಾದವರು ಕೆಲಸ ಮಾಡಬೇಕು. ಆ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ. ಮಾಜಿ ಸಿಎ ಸಿದ್ದರಾಮಯ್ಯ ಒಬ್ಬ ಅನುಭವಿ ರಾಜಕಾರಣಿ. ಅಂತವರ ಬಾಯಲ್ಲಿ ಈ ಮಾತು ಯಾಕೆ ಬಂತೋ ಗೊತ್ತಿಲ್ಲ. ಯಾವ ಅರ್ಥದಲ್ಲಿ ಸಿದ್ದರಾಮಯ್ಯ ಹಾಗೆ ಹೇಳಿದ್ದರೋ ಗೊತ್ತಿಲ್ಲ. ಬಹುಶಃ ಕಾಂಗ್ರೆಸ್ ಮುಗಿಸಲು ಹೀಗೆ ಹೇಳಿರಬೇಕು ಎಂದು ಟಾಂಗ್ ನೀಡಿದರು.

ಬಿಜೆಪಿ ಪರ ಅಮಿತ್ ಶಾ ಹಾಗೂ ಕಾಂಗ್ರೆಸ್ ಪರ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಅಮಿತ್ ಶಾ ಹಾಗೂ ಪ್ರಿಯಾಂಕಾ ಗಾಂಧಿ ಆಟ ರಾಜ್ಯದಲ್ಲಿ ನಡೆಯಲ್ಲ. ಕನ್ನಡ ನಾಡಿಗೆ ಅವರ ಕೊಡುಗೆ ಏನೂ ಇಲ್ಲ. ಅಮಿತ್ ಶಾಗೆ ರಾಜ್ಯದಲ್ಲಿ ಜನ ಬೆಂಬಲ ವ್ಯಕ್ತವಾಗುತ್ತಿಲ್ಲ. ರ್ಯಾಲಿಗೆ ಹೆಚ್ಚಿನ ಜನ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಜನ ಬೆಂಬಲ ಕಳೆದುಕೊಂಡಿದ್ದಾರೆ. ಜೆಡಿಎಸ್ ಯಾರೊಂದಿಗೂ ಒಪ್ಪಂದ ಮಾಡಿಕೊಳ್ಳಲ್ಲ. ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read