HomeKarnatakaBIG NEWS: ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ, ಇಂತವರನ್ನು ನಾವು ನೋಡಿರಲಿಲ್ಲ; ಕಾಂಗ್ರೆಸ್ ವಿರುದ್ಧ ಕೆ.ಎಸ್....

BIG NEWS: ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ, ಇಂತವರನ್ನು ನಾವು ನೋಡಿರಲಿಲ್ಲ; ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಗ್ಯಾರಂಟಿ ಹೆಸರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ, ಇಂತವರನ್ನು ನಾವು ನೋಡಿರಲಿಲ್ಲ. ಗ್ಯಾರಂಟಿ ಹೆಸರಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ನವರು ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಕಿ ಕೊಡುತ್ತಿರುವುದು ಪ್ರಧಾನಿ ಮೋದಿ ಎನ್ನುವುದು ಜನರಿಗೆ ಗೊತ್ತಿದೆ. ಉಚಿತವಾಗಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದ್ದಾರೆ. ಸರ್ಕಾರ ಇನ್ನೂ ಮನೆ ಯಜಮಾನಿ ಖಾತೆಗೂ ಹಣ ಹಾಕಿಲ್ಲ. ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular