BIG NEWS: ಕನಕಪುರದಲ್ಲೂ ಆರ್. ಅಶೋಕ್ ಅಭ್ಯರ್ಥಿ; ಪದ್ಮನಾಭ ನಗರದಿಂದ ಕಣಕ್ಕಿಳಿಯಲು ಮುಂದಾದ್ರಾ ಡಿ.ಕೆ. ಸುರೇಶ್ ?

ಬಿಜೆಪಿಯಿಂದ ಕೆಎಂಎಫ್ ಖಾಸಗೀಕರಣಗೊಳಿಸುವ ಹುನ್ನಾರ : ಡಿ.ಕೆ.ಸುರೇಶ್ - Eesanje News

ಮಂಗಳವಾರ ರಾತ್ರಿ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಸಚಿವ ಆರ್. ಅಶೋಕ್ ಅವರಿಗೆ ಪದ್ಮನಾಭನಗರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುತ್ತಿರುವ ಕನಕಪುರ ಕ್ಷೇತ್ರಕ್ಕೂ ಟಿಕೆಟ್ ನೀಡಲಾಗಿದೆ.

ಇದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿರುವ ವರುಣಾ ಕ್ಷೇತ್ರಕ್ಕೆ ಸಚಿವ ವಿ. ಸೋಮಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದ್ದು, ಇದರ ಜೊತೆಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ಸಹ ನೀಡಲಾಗಿದೆ. ಹೀಗಾಗಿ ಆರ್. ಅಶೋಕ್ ಹಾಗೂ ವಿ. ಸೋಮಣ್ಣ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ.

ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದಲ್ಲಿಯೇ ಕಟ್ಟಿ ಹಾಕುವ ಸಲುವಾಗಿ ಬಿಜೆಪಿ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದ್ದು, ಇದೀಗ ಇದಕ್ಕೆ ತಿರುಗೇಟು ನೀಡಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎನ್ನಲಾಗಿದೆ.

ಸಹೋದರ ಡಿ.ಕೆ. ಸುರೇಶ್ ಅವರನ್ನು ಸದಾಶಿವನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ಡಿ.ಕೆ. ಶಿವಕುಮಾರ್ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರನನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read