HomeKarnatakaBIG NEWS: ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ......? ನಾಳಿನ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ...

BIG NEWS: ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ……? ನಾಳಿನ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಭಾಗಿಯಾಗಿ ಎಂದು ಕರೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಆಡಳಿತ ಹೇಗೆ ಮಾಡುವುದು ಎಂಬುದನ್ನೇ ಬಿಜೆಪಿ ಮರೆತು ಹೋಗಿದೆ ಎಂದು ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ ? ಹೆಚ್ಚುವರಿ ಅಕ್ಕಿ ವಿತರಣೆ ಮಾಡಲು ನಿರಾಕರಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ಜನ ಅವರನ್ನು ಮನೆಗೆ ಕಳುಹಿಸದರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಕೊಡಲ್ಲ ಅಂತಿದ್ದಾರೆ. ಕೇಂದ್ರದ ಧೋರಣೆ ವಿರುದ್ಧ ಕಾಂಗ್ರೆಸ್ ನಾಳೆ ಪ್ರತಿಭಟನೆ ನಡೆಸಲಿದೆ. ಬಿಜೆಪಿಗೆ ಮತ ಹಾಕಿಲ್ಲ ಎಂದು ಕನ್ನಡಿಗರಿಗೆ ಮೋಸ ಮಾಡ್ತಿದ್ದೀರಾ  ? ನಾಳೆ ಕಾಂಗ್ರೆಸ್ ನಡೆಸುವ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular