ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಿದ್ದಂತೆ ಮೊದಲ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಒಂದಾಗಿರಲಿವೆ ಎಂದು ತಿಳಿಸಿದ್ದಾರೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ನಾವು ಸಿದ್ಧ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದಾರೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
— Siddaramaiah (@siddaramaiah) May 18, 2023

