BIG NEWS: ಕರ್ನಾಟಕದ ಈ ಜಿಲ್ಲೆಗಳಲ್ಲೂ 5G ಸೇವೆ ಆರಂಭಿಸಿದ ಜಿಯೋ

ಬೆಂಗಳೂರು: ರಿಲಯನ್ಸ್ ಜಿಯೋ ಇಂದು (ಜನವರಿ 24, ಮಂಗಳವಾರ) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿ ದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ.

ರಿಲಯನ್ಸ್ ಜಿಯೋ ಈ ಹೆಚ್ಚಿನ ನಗರಗಳಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಇಂದಿನಿಂದ ಪ್ರಾರಂಭ ಆಗುವ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್ ಕಂ ಆಫರ್ ಮೂಲಕ ಆಹ್ವಾನಿಸಲಾಗುತ್ತದೆ.

ಕರ್ನಾಟಕದ ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ತುಮಕೂರು ಹಾಗೂ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 45 ಹೆಚ್ಚುವರಿ ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಎಲ್ಲೆಡೆ 5ಜಿ ಸೇವೆಗಳ ಅತಿದೊಡ್ಡ ಜಾರಿಗಳಲ್ಲಿ ‌‌ಒಂದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read