BIG NEWS: ಕರ್ನಾಟಕ ಅರಣ್ಯ ಸಿಬ್ಬಂದಿ – ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ

ಚಾಮರಾಜನಗರ: ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಕಾಳಗ ನಡೆದಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಪ್ರದೇಶ ಪಾಲಾರ್ ನಲ್ಲಿ ನಡೆದಿದೆ.

ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ಪ್ರದೇಶಕ್ಕೆ ತಮಿಳುನಾಡು ಬೇಟೆಗಾರರು ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಕರ್ನಾಟಕ ಅರಣ್ಯ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಕರ್ನಾಟಕ ಅರಣ್ಯ ಸಿಬ್ಬಂದಿಗಳು, ಬೇಟೆಗಾರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಅರಣ್ಯಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read