HomeKarnatakaBIG NEWS: ಕಲುಷಿತ ನೀರು ಸೇವನೆ; ಮಹಿಳೆ ಸಾವು

BIG NEWS: ಕಲುಷಿತ ನೀರು ಸೇವನೆ; ಮಹಿಳೆ ಸಾವು

ಕೊಪ್ಪಳ: ರಾಯಚೂರಿನ ಬಳಿಕ ಈಗ ಕೊಪ್ಪಳದಲ್ಲಿಯೂ ಕಲುಷಿತ ನೀರಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲುಷಿತ ನೀರು ಸೇವಿಸಿ 65 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿದೆ. 10ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

ಮೃತ ಮಹಿಳೆಯನ್ನು ಹೊನ್ನಮ್ಮ ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡಿರುವವರನ್ನು ಕನಕಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಗ್ರಾಮದಲ್ಲಿ ಹಲವರು ವಾಂತಿ-ಬೇದಿಯಿಮ್ದ ಬಳಲುತ್ತಿದ್ದರು. ಕಲುಷಿತ ನೀರು ಸೇವನೆಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಅಲ್ಲದೇ ಕಲುಷಿತ ನೀರು ಪೂರೈಸುತ್ತಿರುವ ಗ್ರಾಮ ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular