HomeKarnatakaBIG NEWS: ಕಳ್ಳತನಕ್ಕೆ ಸಹಾಯ; ಕಾನ್ಸ್ ಟೇಬಲ್ ಸಸ್ಪೆಂಡ್

BIG NEWS: ಕಳ್ಳತನಕ್ಕೆ ಸಹಾಯ; ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಕಳ್ಳತನಕ್ಕೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಲಾಗಿದೆ.

ಯಲ್ಲಪ್ಪ ಸಸ್ಪೆಂಡ್ ಆಗಿರುವ ಬನಶಂಕರಿ ಠಾಣೆಯ ಕ್ರೈಂ ವಿಭಾಗದ ಕಾನ್ಸ್ ಟೇಬಲ್. ಬನಶಂಕರಿ ಠಾಣೆ ಪೊಲೀಸರು ಕಳ್ಳತನ ಮಾಡಿದ್ದ ಗ್ಯಾಂಗ್ ನ್ನು ಹಿಡಿದಿದ್ದರು. ಈ ವೇಳೆ ಕಳ್ಳರು, ಪೊಲೀಸ್ ಕಾನ್ಸ್ ಟೇಬಲ್ ಯಲ್ಲಪ್ಪ ಸಹಾಯದ ಬಗ್ಗೆ ಬಾಯ್ಬಿಟ್ಟಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಕಾನ್ಸ್ ಟೇಬಲ್ ಪಾತ್ರದ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಯಲ್ಲಪ್ಪ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular