BIG NEWS: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಚಾರ; ಒಂದು ಕೈಯಲ್ಲಿ ಕೊಟ್ಟು ಇನ್ನೊಂದರಲ್ಲಿ ಕಿತ್ಕೋಬಾರ್ದು; ಸರ್ಕಾರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣೆಗೂ ಮುನ್ನ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಕೊಡಲೇಬೇಕು. ಆದರೆ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು ಎಂದು ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಜನರಿಗೆ ಗ್ಯಾರಂಟಿ ಭರವಸೆ ಕೊಟ್ಟ ಮೇಲೆ ಈಗ ಕೊಡಲೇಬೇಕು. ಈಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತಂದಿಲ್ಲವೇ ಹಾಗೆ ಉಳಿದ ಯೋಜನೆಯನ್ನು ಜಾರಿಗೆ ತರಬೇಕು. ಮಾತು ಕೊಟ್ಟಂತೆ ಸರ್ಕಾರ ನಡೆದುಕೊಳ್ಳಬೇಕು ಎಂದರು.

ಇದೇ ವೇಳೆ ವಿದ್ಯುತ್ ದರ ಹೆಚ್ಚಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವಿದ್ಯುತ್ ದರ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳು ಉಳಿಯುವುದು ಕಷ್ಟವಾಗಿದೆ. ಹಿಂದಿನ ವಿದ್ಯುತ್ ದರವನ್ನೇ ಮುಂದುವರೆಸಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read