BIG NEWS: ಕಾಂಗ್ರೆಸ್-ಜೆಡಿಎಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ

ಪುತ್ತೂರು: ಕರ್ನಾಟಕದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ತರಲು ಸಂಕಲ್ಪ ಮಾಡೋಣ ಎಂದು ಕೆಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲೆಯ ಪುತ್ತೂರಿನ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ. ಮತ್ತಷ್ಟು ಅಭಿವೃದ್ಧಿಯತ್ತ ರಾಜ್ಯವನ್ನು ಕೊಂಡೊಯ್ಯೋಣ ಎಂದು ಹೇಳಿದರು.

ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡಿದ್ದ ಭ್ರಷ್ಟ ಪಕ್ಷ ಕಾಂಗ್ರೆಸ್. ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳೂ ಒಂದೇ. ವೋಟ್ ಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ. ಟಿಪ್ಪು ಆರಾಧನೆ ಮಾಡುವ ಪಕ್ಷಕ್ಕೆ ಮತ ನೀಡಬೇಡಿ. ರಾಣಿ ಅಬ್ಬಕ್ಕ ಅವರನ್ನು ಆರಾಧಿಸುವ ಬಿಜೆಪಿಗೆ ಮತ ನೀಡಿ. ದೇಶದಲ್ಲಿ ಭಯೋತ್ಪಾದನೆ, ನಕ್ಸಲೈಟ್ ಮಟ್ಟ ಹಾಕಿದ್ದು ಬಿಜೆಪಿ. ಪಿಎಫ್ ಐ ಬ್ಯಾನ್ ಮಾಡಿ ಜನರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಿದ್ದೇವೆ. ಬಿಜೆಪಿಗೆ ಜನಸಾಮಾನ್ಯರ ರಕ್ಷಣೆಯೇ ಮೂಲ ಉದ್ದೇಶ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read