BIG NEWS: ಕಾಂಗ್ರೆಸ್ ನವರಿಗೆ ಅವರದ್ದೇ ಗ್ಯಾರಂಟಿ ಇಲ್ಲ, ಅದ್ಕೆ ಕಾರ್ಡ್ ಹಂಚುತ್ತಿದ್ದಾರೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ: ಈ ಬಾರಿ ಬಿಜೆಪಿಗೆ ಬಹುಮತ ಸಿಗುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಪಕ್ಷ, ಸಂಘಟನೆಯಲ್ಲಿ ಬಹಳ ಗಟ್ಟಿಯಾಗಿದೆ. ಕಾಂಗ್ರೆಸ್ ನವರಿಗೆ ಅವರದ್ದೇ ಗ್ಯಾರಂಟಿ ಇಲ್ಲ. ಅದಕ್ಕೆ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆ ಕಾರ್ಡ್ ಪಡೆದು ಜನರು ಏನು ಉಪ್ಪಿನಕಾಯಿ ಹಾಕಬೇಕಾ ? ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅವರ ಯೋಜನೆ ಯಾವುದೂ ಅನುಷ್ಠಾನ ಆಗುವುದೂ ಇಲ್ಲ. ಕಾಂಗ್ರೆಸ್ ನಾಯಕರಿಂದ ಜನರನ್ನು ಮರಳು ಮಾಡುವ ಕೆಲಸ ನಡೆಯುತ್ತಿದೆ. ಆದರೆ ಎಲ್ಲಾ ಸಂದರ್ಭದಲ್ಲೂ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read