BIG NEWS: ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ಕೊಡ್ತಾರೆ; ಹೊಸ ಬಾಂಬ್ ಸಿಡಿಸಿದ MLC ಲಖನ್ ಜಾರಕಿಹೊಳಿ

ಬೆಳಗಾವಿ: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಒಂದೆಡೆ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯುವ ಯತ್ನ ನಡೆದಿದ್ದರೆ ಇನ್ನೊಂದೆಡೆ ಆಪರೇಷನ್ ಕಮಲದ ಮಾತು ಜೋರಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಬರದಿದ್ದರೆ ಆಪರೇಷನ್ ಕಮಲದ ಬಗ್ಗೆ ಎಂಎಲ್ ಸಿ ಲಖನ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಖನ್ ಜಾರಕಿಹೊಳಿ, ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳುವ ಮೂಲಕ ಫಲಿತಾಂಶಕ್ಕೂ ಮುನ್ನವೇ ಹೊಸ ಬಾಂಬ್ ಸಿಡಿಸಿದ್ದಾರೆ.

120 ಸ್ಥಾನಗಳು ಬಿಜೆಪಿಗೆ, 85 ಸ್ಥಾನಗಳು ಕಾಂಗ್ರೆಸ್ ಗೆ ಸಿಗಲಿದೆ. ಅದರಲ್ಲಿ 20 ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿಗೆ ಬರ್ತಾರೆ. ಗೋವಾದಲ್ಲಿ ಹೇಗೆ ಆಯ್ತಲ್ಲ ಇಲ್ಲಿಯೂ ಹಾಗೇ ಆಗುತ್ತೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read