HomeKarnatakaBIG NEWS: ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಆರ್ಭಟ; ಕುಂದಗೋಳದಲ್ಲಿ ರೋಡ್ ಶೋ; ಮತ್ತೊಮ್ಮೆ ಬಿಜೆಪಿ...

BIG NEWS: ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಆರ್ಭಟ; ಕುಂದಗೋಳದಲ್ಲಿ ರೋಡ್ ಶೋ; ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ ಕೇಂದ್ರ ಗೃಹ ಸಚಿವ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಧಾರವಾಡದ ಕುಂದಗೋಳದಲ್ಲಿ ರೋಡ್ ಶೋ ಮೂಲಕ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದರು.

ಕುಂದಗೋಳ ಪಟ್ಟಣದ ಕೆರೆಕಟ್ಟೆ ಅಂಗಳದಿಂದ 1 ಕೀ.ಮೀ ವರೆಗೆ ರೋಡ್ ಶೋನಲ್ಲಿ ಭಾಗಿಯಾದ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕರ್ನಾಟಕವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಲೂಟಿ ಮಾಡಿವೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ದೆಹಲಿ ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿಸರ್ಕಾರವನ್ನು ಕೆಡವಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ಜನತೆಗೆ ಅಭಿವೃದ್ಧಿಪರ ಉತ್ತಮ ಆಡಳಿತ ನೀಡುತ್ತಿದೆ. ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುತ್ತಿದ್ದೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 371 ತೆಗೆದು ಹಾಕಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿ ಬಹುಮತದಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಕಾರ್ಯಕರ್ತರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular