BIG NEWS: ಕಾಂಗ್ರೆಸ್ ವಾರಂಟಿ ಮುಗಿದಿದೆ; ಗ್ಯಾರಂಟಿಗಳಿಗೆ ಬೆಲೆಯಿಲ್ಲ ಎಂದ ಪ್ರಧಾನಿ ಮೋದಿ

ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳಿನ ಗ್ಯಾರಂಟಿಗಳಿಗೆ ಯಾವುದೇ ಬೆಲೆಯಿಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶದಲ್ಲಿಯೇ ಕಾಂಗ್ರೆಸ್ ವಾರಂಟಿ ಮುಗಿದಿದೆ. ಇನ್ನು ರಾಜ್ಯದಲ್ಲಿ ಘೋಷಣೆ ಮಾಡಿರುವ ಸುಳ್ಳಿನ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಬೆಲೆ ಇಲ್ಲ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಸ್ವತಃ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ಗ್ಯಾರಂಟಿ ಕಾರ್ಡ್ ಯೋಜನೆ ಎಂಬ ಸುಳ್ಳು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಮೊದಲಿನಿಂದಲೂ ಆತಂಕವಾದಿಗಳ ತುಷ್ಟೀಕರಣ ಮಾಡುತ್ತಿದೆ. ಭಯೋತ್ಪಾದಕರು ಸತ್ತಾಗ ಕಾಂಗ್ರೆಸ್ ನಾಯಕರು ಕಣ್ಣೀರು ಹಾಕಿದ್ದರು. ರಾಜ್ಯದಲ್ಲಿಯೂ ಕಾಂಗ್ರೆಸ್ ನಾಯಕರು ಆತಂಕವಾದಿಗಳ ಬೆಂಬಲಕ್ಕೆ ನಿಂತಿದ್ದಾರೆ. ಆತಂಕವಾದಿಗಳ ಪರ ಮಾತನಾಡುವ ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಜನರು ಬಿಜೆಪಿಗೆ ಮತ ಹಾಕಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read