BIG NEWS: ಕಾಂಗ್ರೆಸ್ ಸಂಸ್ಕೃತಿ ಯೂಸ್ & ಥ್ರೋ ಸಂಸ್ಕೃತಿ; ಚುನಾವಣೆವರೆಗಷ್ಟೇ ಅಲ್ಲಿ ಸನ್ಮಾನ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ ಇದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರಿಗೆ ಲಿಂಗಾಯಿತ ಸಮುದಾಯದ ಮೇಲೆ ಪ್ರೀತಿ ಬಂದಿದೆ. ಚುನಾವಣೆ ನಡೆಯುವವರೆಗೆ ಮಾತ್ರ ಸನ್ಮಾನ ಅಷ್ಟೇ. ಚುನಾವಣೆ ಮುಗಿದ ಬಳಿಕ ಇಲ್ಲಿಂದ ಹೋದವರಿಗೆ ಅವಮಾನ ಮಾಡ್ತಾರೆ ಎಂದರು.

ಅರಸು, ವಿರೇಂದ್ರ ಪಾಟೀಲ್ ಗೆ ಅವಮಾನ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಯೂಸ್ & ಥ್ರೋ ಸಂಸ್ಕೃತಿ. ಚುನಾವಣೆ ಮುಗಿಯುವವರೆಗಷ್ಟೇ ಅವರು ಸನ್ಮಾನ ಮಾಡೋದು ಎಂದು ಕಿಡಿಕಾರಿದರು.

ಜಗದೀಶ್ ಶೆಟ್ಟರ್ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ಅವರೇ ಪಕ್ಷ ಬಿಟ್ಟು ಹೋಗಿದ್ದಾರೆ. ಶೆಟ್ಟರ್ ಮತ್ತೆ ಪಕ್ಷಕ್ಕೆ ಬರುತ್ತಾರೆ ಎಂಬ ನಿರೀಕ್ಷೆ ಮಾಡುವುದಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read