BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನೂತನ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ 5 ವರ್ಷ ಪೂರ್ಣಗೊಳಿಸಲಿದೆ. ಸಧ್ಯಕ್ಕೆ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆಗಳೂ ಇಲ್ಲ. ಆದರೆ ಲೋಕಸಭಾ ಚುನಾವಣೆ ಬಳಿಕ ಸಣ್ಣಪುಟ್ಟ ಸಮಸ್ಯೆಗಳು ಕಾಣಿಸಬಹುದು ಇದರ ನಡುವೆಯೂ ಕಾಂಗ್ರೆಸ್ ಐದು ವರ್ಷ ಆಡಳಿತ ನಡೆಸಲಿದೆ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಬಗ್ಗೆಯೂ ಮಾತನಾಡಿರುವ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರಿಗೂ ಸಿಎಂ ಆಗುವ ರಾಜಯೋಗವಿದೆ. ಶ್ರೀಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ಬಹುಮತ ಸಿಗುವಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ. ಹಾಗಾಗಿ ಸಂಪುಟ ರಚನೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ಕೊಡದೇ ಎಲ್ಲಾ ಭಾಗಕ್ಕೂ ಪ್ರಾತಿನಿಧ್ಯ ನೀಡುವಂತೆ ಕೋಡಿಮಠದ ಶ್ರೀಗಳು ತಿಳಿಸಿದ್ದಾರೆ.

ಅಂದು ಅರಸಿಕೆರೆ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಸಿದ್ದರಾಮಯ್ಯ, ನನ್ನನ್ನು ಭೇಟಿಯಾದ ವೇಳೆ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದಿದ್ದೆ. ಆ ಮಾತು ನಿಜವಾಗಿದೆ. ಸಿದ್ದರಾಮಯ್ಯನವರಿಗೆ ಮತ್ತೊಮ್ಮೆ ಸಿಎಂ ಆಗುವ ಯೋಗವಿದೆ ಎಂದಿದ್ದೆ. ಈಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read