BIG NEWS: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ; ನಟಿ ರಮ್ಯಾಗೆ ಸ್ಥಾನ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಸ್ಟಾರ್ ಪ್ರಚಾರಕರನ್ನು ಘೋಷಣೆ ಮಾಡಿವೆ. ಬಿಜೆಪಿ ಬಳಿಕ ಇದೀಗ ಕಾಂಗ್ರೆಸ್ 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಟಿ ರಮ್ಯಾ ಅವರಿಗೆ ಸ್ಥಾನ ನೀಡಲಾಗಿದೆ.

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ, ಡಿ.ಕೆ.ಸುರೇಶ್, ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್, ರಣದೀಪ್ ಸುರ್ಜೇವಾಲಾ, ಚಿದಂಬರಂ ಸೇರಿದಂತೆ 40 ನಾಯಕರನ್ನು ಕಾಂಗ್ರೆಸ್ ತಾರಾ ಪ್ರಚಾರಕರಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read