BIG NEWS: ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ; HDK

ಶೃಂಗೇರಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದ್ದು, ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶೃಂಗೇರಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ಟಿ-20 ಮ್ಯಾಚ್ ರೀತಿ ಕುತೂಹಲವಿದೆ. ಕೊನೆಯ ಓವರ್ ವರೆಗೂ ಈ ಕುತೂಹಲವಿರಲಿದೆ ಎಂದರು.

ಹಾಸನ ಟಿಕೆಟ್ ನೀಡಿಕೆ ವಿಚಾರವಾಗಿ ನಾಳೆ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಸಭೆಗೆ ಹೆಚ್.ಡಿ.ರೇವಣ್ಣರನ್ನು ಕರೆದಿಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬದವರೇ. . ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿಯನ್ನು ಸೋಲಿಸುತ್ತೇವೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್ ನೀಡಲಾಗುವುದು ಎಂದರು.

ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ ಮಾಡಲಾಗುವುದು. ಈ ಬಗ್ಗೆ ರಾಜ್ಯದ ಜನತೆಗೂ ಕುತೂಹಲವಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read