BIG NEWS: ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಅಪಘಾತ ಪ್ರಕರಣ; ಓರ್ವ ವಿದ್ಯಾರ್ಥಿನಿ ದುರ್ಮರಣ

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು 26 ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಕಾವ್ಯಾ ಬರಮಪ್ಪ ಬ್ಯಾಡಗಿ ಮೃತ ಪಿಯು ವಿದ್ಯಾರ್ಥಿನಿ, ಘಟನೆಯಲ್ಲಿ 7 ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಶಿರಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

90 ವಿದ್ಯಾರ್ಥಿಗಳು ಮಳಗಿಯಿಂದ ಪ್ರವಾಸಕ್ಕೆಂದು ಬಂದಿದ್ದರು. 2 ಟ್ರ್ಯಾಕ್ಟರ್ ಗಳಲ್ಲಿ 90 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಶಿರಸಿಯ ಕೊಳಗಿ ಬಳಿ ಒಂದು ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. 26 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅವರಲ್ಲಿ 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿತ್ತು, ಇದೀಗ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read