BIG NEWS: ಕಿಚಡಿ ಸರ್ಕಾರ ಬೇಡ ಎಂದ ಸಚಿವ ಆರ್. ಅಶೋಕ್

ರಾಮನಗರ: ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ 70 ಪ್ರಕರಣಗಳನ್ನು ಮುಚ್ಚಿ ಹಾಕಲಾಗಿತ್ತು. ಕಾಂಗ್ರೆಸ್-ಜೆಡಿಎಸ್ ಅಣ್ಣ-ತಮ್ಮಂದಿರು ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಇದ್ದರೆ ಎಲ್ಲವನ್ನು ಮುಚ್ಚಿ ಹಾಕುತ್ತಿದ್ದರು. ಆದರೆ ನಮ್ಮದು ಪಾರದರ್ಶಕ ಸರ್ಕಾರ. ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿದೆವು ಎಂದರು.

ಮಾಡಾಳ್ ವಿರೂಪಾಕ್ಷಪ್ಪ ಮಗನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ವಿಚಾರವಾಗಿ ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ ಎಂದರು.

ಕಾಂಗ್ರೆಸ್ – ಜೆಡಿಎಸ್ ನವರು ಅಣ್ಣತಮ್ಮಂದಿರು. ಇಂದು ಜೆಡಿಎಸ್ ಸರ್ಕಾರ ಇದ್ದಿದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು. ಕಿಚಡಿ ಸರ್ಕಾರ ಬೇಡ. ಸ್ಥಿರ ಸರ್ಕಾರ ಬೇಕಿದೆ. ಹೆಚ್.ಡಿ. ಕುಮಾರಸ್ವಾಮಿ ಹೋಟೆಲ್ ನಲ್ಲಿ ಕುಳಿತು ಆಡಳಿತ ನಡೆಸಿದರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್- ಜೆಡಿಎಸ್ ನವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read