HomeKarnatakaBIG NEWS: ಕೆಂಪೇಗೌಡರ ಭಾವಚಿತ್ರಕ್ಕೆ ಮಸಿ; ತೀವ್ರಗೊಂಡ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

BIG NEWS: ಕೆಂಪೇಗೌಡರ ಭಾವಚಿತ್ರಕ್ಕೆ ಮಸಿ; ತೀವ್ರಗೊಂಡ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕುಣಿಗಲ್ ಬೈಪಾಸ್ ಸರ್ಕಲ್ ಬಳಿ ನಡೆದಿದೆ.

ರಾಜ್ಯ ಒಕ್ಕಲಿಗರ ವೇದಿಕೆಯ ಬೋರ್ಡ್ ನಲ್ಲಿದ್ದ ಕೆಂಪೇಗೌಡರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಂಪೇಗೌಡ ಹೋರಾಟ ಬಳಗ ಪ್ರತಿಭಟನೆ ನಡೆಸುತ್ತಿದೆ.

ಕಪ್ಪುಪಟ್ಟಿ ಧರಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಮಾನವ ಸರಪಳಿ ರಚಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಸ್ಥಳದಲ್ಲೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular