HomeKarnatakaBIG NEWS: ಕೆಡಿಪಿ ಸಭೆಯಲ್ಲಿ ತಲೆಸುತ್ತಿ ಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ

BIG NEWS: ಕೆಡಿಪಿ ಸಭೆಯಲ್ಲಿ ತಲೆಸುತ್ತಿ ಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ

ತುಮಕೂರು: ಕೆಡಿಪಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ತಲೆಸುತ್ತಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಸಭೆಯಲ್ಲಿ ನಿಂತು ಇಲಾಖೆ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ತಲೆಸುತ್ತಿ ಬಂದು ಕೆಳಗೆ ಬಿದ್ದಿದ್ದಾರೆ. ಅಧಿಕಾರಿ ಕೆಳಗೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಅಧಿಕಾರಿಗಳು ಆರೈಕೆ ಮಾಡಿದ್ದಾರೆ.

ಇದೇ ವೇಳೆ ಕೆಡಿಪಿ ಸಭೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅಧಿಕಾರಿಯೊಬ್ಬರನ್ನು ಸಚಿವ ಡಾ.ಜಿ.ಪರಮೇಶ್ವರ್ ಗೆಟ್ ಔಟ್ ಎಂದು ಸಭೆಯಿಂದಲೇ ಹೊರಕಳುಹಿಸಿದ ಪ್ರಸಂಗವೂ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular