HomeCrimeBIG NEWS: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

BIG NEWS: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಮಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ವಿರುದ್ಧ ಮಹಿಳೆ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.

ಕೆಲಸ ಕೊಡಿಸುವುದಾಗಿ ಕರೆದೊಯ್ದ ಉದ್ಯಮಿ ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡುತ್ತಿದ್ದಂತೆ ಮಹಿಳೆ ಕಿರುಚುತ್ತಾ ಕಾರಿನಿಂದ ಇಳಿದು ಹೊರಬಂದಿದ್ದಾಳೆ. ಬೈಕ್ ನಲ್ಲಿ ಬಂದ ಯುವಕರು ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆ ತನ್ನ ಪತಿಯೊಂದಿಗೆ ಬೆಳ್ತಂಗಡಿ ಠಾಣೆಗೆ ತೆರಳಿ ಉದ್ಯಮಿ ವಿರುದ್ಧ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರು ದಾಖಲಾಗುತ್ತಿದ್ದಂತೆ ಉದ್ಯಮಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular