HomeKarnatakaBIG NEWS: ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆ; ಅಸ್ವಸ್ಥ ಯುವತಿ ...

BIG NEWS: ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆ; ಅಸ್ವಸ್ಥ ಯುವತಿ ಸೆಂಟ್ ಮಾರ್ಥಾಸ್ ಗೆ ದಾಖಲು; ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವರುಣಾರ್ಭಟಕ್ಕೆ ಬೆಂಗಳೂರಿನ ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಆರ್.ಸರ್ಕಲ್ ಅಂಡರ್ ಪಾಸ್ ಹಾಗೂ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆಯಾಗಿ, ಕಾರಿನಲ್ಲಿ ಸಿಲುಕಿದ್ದ ಆರು ಜನರ ಪೈಕಿ, ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸಿದ್ದ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದಾಗ ಭಾರಿ ಮಳೆಗೆ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಮುಳುಗಿದೆ. ಕಾರಿನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಭಾರಿ ಮಳೆಯಿಂದಾಗಿ ಕೆ.ಆರ್ ಸರ್ಕಲ್ ಅಂಡರ್ ಪಾಸ್ ಏಕಾಏಕಿ ಸಂಪೂರ್ಣ ಜಲಾವೃತಗೊಂಡಿದ್ದು, ಕಾರು, ಎರಡು ಆಟೋ ಸೇರಿದಂತೆ ಇನ್ನು ಹಲವು ವಾಹನಗಳು ಸಿಲುಕಿಕೊಂಡಿವೆ.

For Latest News Updates, Join Our Whatsapp Community🚩
RELATED ARTICLES

Most Popular