BIG NEWS: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಸಿಐಡಿ ತಂಡ ಭೇಟಿ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ ನೀಡಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ಇತ್ತೀಚೆಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರ್ಗಾವಣೆ ಮಾಡಿದ್ದಕ್ಕೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿದ್ದ ಜಗದೀಶ್, ನೆಲಮಂಗಲದ ಡಿಪೋ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read