BIG NEWS: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವೇನು ಪುಕ್ಸಟ್ಟೆ ಕೇಳ್ತಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರದ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾವೇನು ಪುಕ್ಸಟ್ಟೆ ಕೇಳ್ತಿಲ್ಲ ಎಂದು ಗುಡುಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದವರು ಪುಕ್ಸಟ್ಟೆ ಏನು ಅಕ್ಕಿ ಕೊಡ್ತಿಲ್ಲ, ನಾವು ಅವರಿಗೆ ಪುಕ್ಸಟ್ಟೆ ಅಕ್ಕಿ ಕೊಡಿ ಎಂದು ಕೇಳ್ತಿಲ್ಲ. ಹೀಗಿದ್ದು ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಛತ್ತೀಸಗಢ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರದ ಧೋರಣೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು. ಈ ವಿಚಾರವಾಗಿ ಕೇಂದ್ರದ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವ ಸುಳಿವನ್ನೂ ಡಿ.ಕೆ.ಶಿವಕುಮಾರ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read