BIG NEWS: ಕೈ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಬಗ್ಗೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ತಡರಾತ್ರಿ ಎರಡು ತಾಸು ಪಾಠ ಮಾಡಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ ದಟ್ಟವಾಗಿದೆ. ಸ್ಟ್ರಾಂಗ್ ರೂಮ್ ಗಳ ಮೇಲೆ ಗಮನವಿಡುವಂತೆ ಸೂಚಿಸಿದ್ದಾರೆ. ಬೇರೆ ಪಕ್ಷಗಳ ಯಾವುದೇ ಆಮಿಷ, ಆಪರೇಷನ್ ಗಳಿಗೆ ಒಳಗಾಗಬಾರದು. ಲೀಡ್ ಸಿಗುತ್ತಿದ್ದಂತೆ ಬೆಂಗಳೂರಿಗೆ ಬರಬೇಕು ಎಂದು ಹೇಳಿದ್ದಾರೆ.

ಸರ್ಕಾರ ರಚನೆಯಾಗುವವರೆಗೆ ನಾವು ಸೂಚಿಸಿದ ಸ್ಥಳದಲ್ಲಿ ಇರಬೇಕು ಎಂದು ಸಂದೇಶ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read