ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ. ಸದ್ಯ, ಗ್ಯಾಂಗ್ ನ ವಿಚಾರಣೆಯನ್ನು ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆ ಮುಗಿಸಿ ಹೊರಗೆ ಬರುವಾಗ ಫೋನ್ ನಂಬರ್ ಕೊಡುವಂತೆ ದರ್ಶನ್ ಅವರಿಗೆ ಪವಿತ್ರಾ ಗೌಡ ದುಂಬಾಲು ಬಿದ್ದಿದ್ದರು ಎಂದು ವರದಿಯಾಗಿದೆ.
ಈ ಬಾರಿ ಕೂಡ ಕೋರ್ಟ್ ಒಳಗೆ ಇಬ್ಬರ ನಡುವೆ ಯಾವುದೇ ಸಂಭಾಷಣೆ ನಡೆಯಲಿಲ್ಲ. ಲಿಫ್ಟ್ನಲ್ಲಿ ಇಳಿದು ಕೆಳಗೆ ಬರುವಾಗ ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೊಡುವಂತೆ ಪವಿತ್ರಾ ಗೌಡ ಕೇಳಿದ್ದಾರೆ. ಕೊನೆಗೆ ದುಂಬಾಲು ಬಿದ್ದು ದರ್ಶನ್ ಅವರ ಫೋನ್ ನಂಬರ್ ಅನ್ನು ಪವಿತ್ರಾ ಗೌಡ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ. ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.