BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜನರಿಗೆ ಮೋಸ ಮಾಡಿ ತಪ್ಪಿಸಿಕೊಳ್ಳಲು ಈಗ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರೈತರಿಗೆ, ಜನರಿಗೆ ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಈಗ ಈ ರೀತಿ ನಾಟಕವಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಈಗ ಜನರಿಗೆ ಮೋಸ ಮಾಡುತ್ತಿದೆ. ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ಎಲ್ಲರಿಗೂ ಅಕ್ಕಿ ನೀಡುತ್ತಿದೆ. ಯಾವುದೇ ಖರ್ಚು ಇಲ್ಲದೇ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ಆದರೆ ಸಿದ್ದರಾಮಯ್ಯ ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು,

ನಿಜ ಹೇಳಬೇಕು ಎಂದರೆ ರಾಜ್ಯ ಸರ್ಕಾರವೇ 10 ಕೆಜಿ ಅಕ್ಕಿ ಕೊಡಬೇಕು. ಕೇಂದ್ರ ನೀಡುವ ಅಕ್ಕಿ ಸೇರಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರದ 5 ಕೆಜಿ, ರಾಜ್ಯದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಹೇಳುತ್ತಿದೆ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read