HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; 146 ದಿನಗಳ ಬಳಿಕ ಮೊದಲ ಬಾರಿಗೆ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; 146 ದಿನಗಳ ಬಳಿಕ ಮೊದಲ ಬಾರಿಗೆ ಅತಿ ಹೆಚ್ಚು ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 1,590 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 146 ದಿನಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.

ದೇಶದಲ್ಲಿ ಈವರೆಗೆ 5,30,824 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 8,601 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,62,832 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 9,497 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,44,324 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,19,560 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular