HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 156 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೋವಿಡ್ ಗೆ ಯಾರೂ ಬಲಿಯಾಗಿಲ್ಲ. ಆದರೆ ದೇಶದಲ್ಲಿ ಈವರೆಗೆ 5,30,757 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,867 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,52,151 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 08,281 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,35,191 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,16,543 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular