HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 524 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 113 ದಿನಗಳಲ್ಲಿ ಮೊದಲ ಬಾರಿ 24ಗಂಟೆಯಲ್ಲಿ 500ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 530782 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,809 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,56,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 01,287 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,55,841 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 44,846 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular