HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ ಮತ್ತೆ 190ಕ್ಕೂ ಹೆಚ್ಚು...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ ಮತ್ತೆ 190ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕದ ನಡುವೆಯೇ ಕಳೆದ 24 ಗಂಟೆಯಲ್ಲಿ 197 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ‌

ನಿನ್ನೆ 170 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಒಂದೇ ದಿನದಲ್ಲಿ ಮತ್ತೆ 197 ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

24 ಗಂಟೆಯಲ್ಲಿ ಕೋವಿಡ್ ಮಹಾಮಾರಿಗೆ ಓರ್ವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,725 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,257 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,47,775 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 49,597 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,16,25,966 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,94,968 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular