HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 600 ಕ್ಕೂ ಹೆಚ್ಚು...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 600 ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 618 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,789 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 4,197 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,56,970 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 8,000 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,71,236 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 95,385 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular