HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 10,179 ಸಕ್ರಿಯ ಪ್ರಕರಣ ದಾಖಲು

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 10,179 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 906 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 20 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,814 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 10,179 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,42,065 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,870 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,94,822 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,29,610 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular