HomeIndiaBIG NEWS: ಕೋವಿಡ್, H3N2 ಸೋಂಕು ಹೆಚ್ಚಳ; ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

BIG NEWS: ಕೋವಿಡ್, H3N2 ಸೋಂಕು ಹೆಚ್ಚಳ; ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ಕೋವಿಡ್ ಹಾಗೂ H3N2 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.

ಕೋವಿಡ್, H3N2 ಸೋಂಕು ನಿಯಂತ್ರಣ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ. ಮುಂಜಾಗೃತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಇದೇ ವೇಳೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1134 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular