BIG NEWS: ಗಟ್ಟಿಮುಟ್ಟಾಗಿ ಆರಾಮವಾಗಿದ್ದೇನೆ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ

ವಿಜಯನಗರ: ಕುಡುಚಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಡೋರ್ ಬಳಿ ಕುಸಿದು ಬಿದ್ದ ಘಟನೆಗೆ ಸಂಬಂಧಿಸಿದಂತೆ ಸ್ವತ: ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಿದ್ದು, ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿದ್ದರಾಮಯ್ಯ, ಗಾಬರಿಪಡುವಂತದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿಯಾಗುವಂತೆ ಮಾಡಬೇಡಿ ಎಂದು ವಿನಂತಿಸಿದ್ದಾರೆ.

ಇಂದು ಬೆಳಿಗ್ಗೆ ವಿಜಯನಗರ ಜಿಲ್ಲೆಯ ಕುಡಚಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ.ಶ್ರೀನಿವಾಸ್ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಿದ್ದರಾಮಯ್ಯನವರು ಕಾರಿನ ಸೈಡ್ ಸ್ಟೆಪ್ ನಲ್ಲಿ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಕುಸಿದು ಬೀಳುವಂತಾಗಿದ್ದರು. ಸ್ಥಳದಲ್ಲಿದ್ದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರನ್ನು ಹಿಡಿದುಕೊಂಡಿದ್ದರಿಂದ ಬೀಳದಂತೆ ಸಾವರಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ನಿಡಿದ್ದಾರೆ.

ಸಿದ್ದರಾಮಯ್ಯ,ಸ್ಪಷ್ಟನೆ,ಕುಡುಚಿ,Siddaramaiah,clarification,kuduchi,Collapse

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read