BIG NEWS: ಗುಡ್ಡ ಕುಸಿದು ಮೂವರು ದುರ್ಮರಣ

ಮಂಗಳೂರು: ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾಗ ಮನೆ ಹಿಂದಿನ ಗುಡ್ದ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಬಳಿ ನಡೆದಿದೆ.

ಸೋಮಶೇಖರ ರೆಡ್ಡಿ (45) ಪತ್ನಿ ಶಾಂತಾ ಹಾಗೂ ಇನ್ನೋರ್ವರು ಮೃತಪಟ್ಟಿದ್ದಾರೆ. 7 ಕಾರ್ಮಿಕರು ತಡೆಗೋಡೆ ನಿರ್ಮಾಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗುಡ್ಡ ಕುಸಿದು ದುರಂತ ಸಂಭವಿಸಿದೆ.

ಮೃತರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನವರು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read