HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ ಅತ್ತೆಗಾ....? ಸೊಸೆಗಾ.....? ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನೆ

BIG NEWS: ಗೃಹಲಕ್ಷ್ಮೀ ಯೋಜನೆ ಅತ್ತೆಗಾ….? ಸೊಸೆಗಾ…..? ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತು ವಿಧಿಸುವ ಕೆಲಸ ಮಾಡಬಾರದು. ಸಮಾಜ ಒಡೆಯುವ ಕೆಲಸವನ್ನು ಕಾಂಗ್ರೆಸ್ ನವರು ಮೊದಲು ನಿಲ್ಲಿಸಬೇಕು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಹೇಶ್ ಟೆಂಗಿನಕಾಯಿ, ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಮನೆಯಲ್ಲಿ ಬಿರುಕು ಮೂಡುವಂತಾಗಿದೆ. ಕಾಂಗ್ರೆಸ್ ನವರು ಮನೆ ಒಡೆಯುವ ಕೆಲಸ ಮಾಡುತ್ತಿದ್ದಾರೆ. 2000 ರೂಪಾಯಿ ಅತ್ತೆಗಾ ? ಸೊಸೆಗಾ ? ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಚನ ಭ್ರಷ್ಟರಾಗಬಾರದು. ಗ್ಯಾರಂಟಿ ಯೋಜನೆ ಈಡೇರದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular