BIG NEWS: ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ಬಿಜೆಪಿ ನಾಯಕ ಬಾಬುರಾಮ್ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ಕಾಂಗ್ರೆಸ್ ನಿಂದಲೇ ಬಂದವರಾಗಿದ್ದರು ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಚಿಂಚನಸೂರ ಕಾಂಗ್ರೆಸ್ ನಿಂದ ಬಂದಿದ್ರು, ಮತ್ತೆ ಅಲ್ಲಿಗೆ ಹೋಗುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಇದೆಲ್ಲವೂ ಸಹಜ ಎಂದು ಹೇಳಿದರು.

ನಿನ್ನೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿದ್ದಾರೆ. ಕರ್ನಾಟಕದ ಜನ ರಾಹುಲ್ ಮಾತಿಗೆ ಬೆಲೆ ಕೊಡಲ್ಲ. ರಾಹುಲ್ ಗಾಂಧಿ ಕಳೆದ ಬಾರಿ ಭೇಟಿ ನೀಡಿದ್ದಕ್ಕೂ ಈ ಬಾರಿ ಭೇಟಿಗೂ ವ್ಯತ್ಯಾಸವಿದೆ. ಸಿದ್ದರಾಮಯ್ಯನವರ ಬೋಗಸ್ ಕಾರ್ಡ್ ಬಗ್ಗೆ ಮಾತನಾಡಿದ್ದಾರೆ. ಬೇರೆ ರಾಜ್ಯದಲ್ಲಿ ಕೊಟ್ಟ ಭರವಸೆಯನ್ನೇ ಈ ರಾಜ್ಯದಲ್ಲಿಯೂ ಕೊಟ್ಟಿದ್ದಾರೆ. ಈ ಮೂಲಕ ಕಾಂಗ್ರೆಸ್ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read